ಕನ್ನಡ
ಭಾರತದ ಪುರಾತನವಾದ ಭಾಷೆಗಳಲ್ಲಿ ಕನ್ನಡವು ಕೂಡ ಒಂದು . ಹಾಗೂ ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯು ಆಗಿದೆ . ಕನ್ನಡ ಕರ್ನಟಕದ ರಾಜ್ಯದ ಆಡಳಿತ ಭಾಷೆ ಆಗಿದೆ .
ಜಗತ್ತಿನಲ್ಲಿ ಹೆಚ್ಚು ಜನರು ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತ್ತೊಂಬತ್ತನಯ ಸ್ಥಾನ ಕನ್ನಡಕ್ಕಿದೆ .೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಭಾಷೆಯನ್ನು ಮಾತನಾಡುತ್ತಾರೆ ಎಂದು ತಿಳಿದುಬಂದಿದೆ . ಇವರಲ್ಲಿ ೫.೫ ಕೋಟಿ ಜನರ ಮಾತೃ ಭಾಷೆ ಕನ್ನಡ ಆಗಿದೆ .
ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ . ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐದುನೂರು ವರ್ಷಗಳ ಚರಿತ್ರೆ ಇದೆ . ಹಾಗೂ ಸಾವಿರ ವರ್ಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ .
ವಿನೋಬಾ ಭಾವೆ ಅವರು ಕನ್ನಡ ಲಿಪಿಯನ್ನು ಲಿಪಿಗಳ ರಾಣಿ ಎಂದು ಹೊಗಳಿದ್ದಾರೆ .